May 10, 2026

ಕಡಬ: ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ:

0
image_editor_output_image-1787325796-1680245658581

ಕಡಬ: ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಬರಹವನ್ನು ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.
ಮಾ.30ರ ತಡರಾತ್ರಿ ಈ ಘಟನೆ ನಡೆದಿದ್ದು ಮೃತ ಯುವಕ ರೆನೀಶ್ (27 ವರ್ಷ) ಎಂದು ಗುರುತಿಸಲಾಗಿದೆ.
ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ಆತನ ಕಿರಿಯ ಸಹೋದರ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ನ ಕೆಲಸಕ್ಕೆ ಹೋಗುತ್ತಿದ್ದ. ನಿನ್ನೆಯೂ ಕೂಡ ಕೆಲಸಕ್ಕೆ ಹೋಗಿದ್ದ ಎನ್ನಲಾಗಿದೆ.

ಒಬ್ಬಂಟಿಯಾಗಿದ್ದರಿಂದ ಮಾನಸಿಕವಾಗಿಯೂ ನೊಂದಿದ್ದ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!