ಮಂಗಳೂರು: ಹಿಂದೂ ಸಂಘಟನೆಯ ಮುಖಂಡ ಸತ್ಯಜೀತ್ ಸುರತ್ಕಲ್ ಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ
ಮಂಗಳೂರು : ಹಿಂದೂ ಸಂಘಟನೆಯ ಮುಖಂಡ ಮತ್ತು ಶ್ರೀ ನಾರಾಯಣಗುರು ವಿಚಾರ ವೇದಿಕೆಯ ರಾಜ್ಯ ಸಮಿತಿ ಅಧ್ಯಕ್ಷರಾದ ಸತ್ಯಜೀತ್ ಸುರತ್ಕಲ್ ಅವರಿಗೆ ಸರ್ಕಾರದಿಂದ ನೀಡಲಾಗಿದ್ದ ಭದ್ರತೆಯನ್ನು ವಾಪಾಸ್ ಪಡೆಯಲಾಗಿದೆ.
ರಾಜ್ಯ ವಿಧಾನ ಸಭಾ ಚುನಾವಣೆ ಘೊಷಣೆಯ ಸಂದರ್ಭದಲ್ಲೇ ಸತ್ಯಜೀತರ ಅಂಗರಕ್ಷಕನನ್ನು ವಾಪಸ್ ಪಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ನಡೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.





