March 11, 2026

ಮಂಗಳೂರು: ದಕ್ಷಿಣ ವಿಧಾನಸಭಾ ಕ್ಷೇತ್ರದ 11,158 ಮಂದಿ ಮತದಾರರ ಹೆಸರುಗಳು ಪಟ್ಟಿಯಿಂದ ರದ್ದು
 

0
65996038.jpg

ಮಂಗಳೂರು: ವಿವಿಧ ಕಾರಣಗಳಿಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 11,158 ಮಂದಿಯ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕಳೆದ ಚುನಾವಣೆಯ ಸಂದರ್ಭದಲ್ಲಿ ಕ್ಷೇತ್ರದಲ್ಲಿ 2,40,057 ಮತದಾರರಿದ್ದರು. ಹೊಸದಾಗಿ ಈಗ 13,487 ಮತದಾರರು ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಒಟ್ಟಾರೆ 1,15,895 ಪುರುಷರು ಮತ್ತು 1,26,447 ಮಹಿಳೆಯರ ಸಹಿತ 2,42,888 ಮತದಾರರಿದ್ದಾರೆ ಎಂದು ಚುನಾವಣಾ ಅಧಿಕಾರಿ ಕೆಂಪೇಗೌಡ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಳೆದ ಅವಧಿಯ ಚುನಾವಣೆ ಸಂದರ್ಭ 56 ಮಂದಿ ಲಿಂಗತ್ವ ಅಲ್ಪಸಂಖ್ಯಾತ (ಟ್ರಾನ್ಸ್‌ಜೆಂಡರ್) ಮತದಾರರಿದ್ದರೆ, ಈ ಬಾರಿ ಅವರ ಸಂಖ್ಯೆ 46ಕ್ಕೆ ಇಳಿಕೆಯಾಗಿದೆ ಎಂದರು.

Leave a Reply

Your email address will not be published. Required fields are marked *

You may have missed

error: Content is protected !!