May 10, 2026

ಗ್ಯಾಸ್ ಸಿಲಿಂಡರ್ ಸ್ಪೋಟ: ಮನೆಯಲ್ಲಿದ್ದ ನಾಲ್ವರು ಮೃತ್ಯು
 

0
DB-10032023-gas.jpg

ಬುಲಂದ್‌ಶಹರ್: ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ನಾಲ್ವರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‍ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ಕೊತ್ವಾಲಿ ನಗರ ಪ್ರದೇಶದ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಸ್ಪೋಟದಿಂದಾಗಿ ನಾಲ್ವರು ಸಾವನ್ನಪ್ಪಿದ್ದು, ಮನೆ ಬೆಂಕಿಗಾಹುತಿಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶ್ಲೋಕ್ ಕುಮಾರ್ ಹೇಳಿದ್ದಾರೆ.

ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಜಿಲ್ಲಾಡಳಿತ, ಪೊಲೀಸರು ಸೇರಿದಂತೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ. ಘವಿಧಿವಿಜ್ಞಾನ ತಂಡವೂ ಸ್ಥಳಕ್ಕಾಗಮಿಸಿದೆ. ನೆರೆಹೊರೆಯವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಸ್ಥಳದಲ್ಲಿ ಕೆಲವು ಗ್ಯಾಸ್ ಸಿಲಿಂಡರ್‌ಗಳು ಮತ್ತು ಡ್ರಮ್‌ಗಳು ದೊರಕಿದ್ದು, ಸ್ಪೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!