ಪಾರ್ಕಿಂಗ್ ಮಾಡಿದ್ದ ಇಲೆಕ್ಟ್ರಿಕ್ ಸ್ಕೂಟರ್ ಸ್ಫೋಟ: ಅಕ್ಕಪಕ್ಕದಲ್ಲಿದ್ದ ನಾಲ್ಕು ಬೈಕ್‌ಗಳು ಬೆಂಕಿಗಾಹುತಿ
ಮಂಡ್ಯ: ಎಲೆಕ್ಟ್ರಿಕ್ ಸ್ಕೂಟರ್‌ವೊಂದು ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡ ಪರಿಣಾಮ ಅಕ್ಕಪಕ್ಕದಲ್ಲಿದ್ದ ನಾಲ್ಕು ಬೈಕ್‌ಗಳು ಸಹ ಸುಟ್ಟು ಕರಕಲಾಗಿರುವ ಘಟನೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಶುಕ್ರವಾರ ನಡೆದಿದೆ. ಬೈಕ್‌ಗಳಿಗೆ ಬೆಂಕಿ ಹೊತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ.


