March 22, 2026

ಮಡಿಕೇರಿ: ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ

0
image_editor_output_image-722895611-1680341367475.jpg

ಮಡಿಕೇರಿ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ.

ವಿರಾಜಪೇಟೆ ತಾಲೂಕಿನ ಇಂಜಿಲಗೆರೆ ಗ್ರಾಮದ ಕಲ್ಲುಕೋರೆ ನಿವಾಸಿ ಪ್ರವೀಣ (31) ಹಾಗೂ ಗಾಂಧಿನಗರ ನಿವಾಸಿ ಇಮ್ರಾನ್ ಅಲಿಯಾಸ್ ಸೋನು (22) ಬಂಧಿತ ಆರೋಪಿಗಳು.

ಪ್ರಕರಣದ ಎರಡನೇ ಆರೋಪಿಯಾಗಿರುವ ಸೋನು 2020ರಲ್ಲಿ ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿ ಜೈಲುವಾಸ ಅನುಭವಿಸಿ ಹಿಂದಿರುಗಿದ್ದಾನೆ.

ಅಲ್ಲದೇ ಜೈಲುವಾಸದ ಸಮಯದಲ್ಲಿ ಅನೇಕ ಮಂದಿಯ ಪರಿಚಯವಾಗಿದ್ದು, ಗಾಂಜಾ ಖರೀದಿ ಮತ್ತು ದೊರಕುವ ಸ್ಥಳದ ಬಗ್ಗೆ ಈತನಿಗೆ ಖಚಿತ ಮಾಹಿತಿ ಇತ್ತು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!