ಮಂಗಳೂರು: 60ಕ್ಕೂ ಹೆಚ್ಚು ರೌಡಿ ಶೀಟರ್‌ಗಳ ಮನೆ ಮೇಲೆ ಪೊಲೀಸರ ದಾಳಿ
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ನಿರ್ದೇಶನದ ಮೇರೆಗೆ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ 60ಕ್ಕೂ ಹೆಚ್ಚೂ ರೌಡಿಶೀಟರ್‌ಗಳ ಮನೆಮೇಲೆ ಮಾ. 31ರ ಶುಕ್ರವಾರ ಮುಂಜಾನೆ ಪೊಲೀಸರು ದಾಳಿ ನಡೆಸಿದ್ದಾರೆ.
ರೌಡಿ ಶೀಟರ್‌ಗಳ ಮನೆಗಳನ್ನು ಶೋಧಿಸಲಾಗಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಸಕ್ತ ಚಲನವಲನದ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ತಿಳಿಸಿದ್ದಾರೆ.