February 3, 2026

ಉಳ್ಳಾಲ: ಕೇರಳದಿಂದ ಸಾಗಾಟ ನಡೆಸುತ್ತಿದ್ದ ದಾಖಲೆ ರಹಿತ 7.95 ಲಕ್ಷ ರೂ. ವಶಕ್ಕೆ

0
IMG-20230401-WA0067.jpg

ಉಳ್ಳಾಲ: ಕೇರಳದಿಂದ ದಾಖಲೆಗಳಿಲ್ಲದೆ ಹಣ ಸಾಗಾಟ ನಡೆಸುತ್ತಿದ್ದ ಕಾರನ್ನು ತಡೆಹಿಡಿದ ಉಳ್ಳಾಲ ಪೊಲೀಸರು ಕಾರಿನಲ್ಲಿದ್ದ ರೂ. 7,095,000 ನಗದು ಸಹಿತ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಕಾಸರಗೋಡು ಕುತ್ರಿಕ್ಕೋಡು ನಿವಾಸಿ ಸುರೇಶ್ ಎಂಬವರಲ್ಲಿದ್ದ ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಉಳ್ಳಾಲ ಪೊಲೀಸರು ಕೇರಳ ಗಡಿಭಾಗ ತಲಪಾಡಿಯಲ್ಲಿ ವಾಹನ ತಪಾಸಣೆಗೈಯ್ಯುತ್ತಿದ್ದಾಗ ನಗದು ಪತ್ತೆಯಾಗಿದೆ. ಚುನಾವಣಾ ಆಯೋಗದ ರಿಟೈನಿಂಗ್ ಅಧಿಕಾರಿಗಳಿಗೆ ನಗದು ಹಾಗೂ ಕಾರನ್ನು ವಿಚಾರಣೆಗೆ ನೀಡಲಾಗಿದೆ.

ಇನ್ನು ಸುರೇಶ್ ಅವರು ಫ್ಯಾಬ್ರಿಕೇಷನ್ ವೃತ್ತಿ ನಡೆಸುವವರಾಗಿದ್ದು, ಮಂಗಳೂರಿನ ಬಂದರಿನಿಂದ ಸಾಮಗ್ರಿಗಳ ಖರೀದಿಗಾಗಿ ಹಣ ತರುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆ ವೇಳೆ ತಿಳಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಹಣವಾದಲ್ಲಿ ಪ್ರಕರಣ ದಾಖಲಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!