April 11, 2025

ಕಡಬ: ಅಕ್ರಮ ಕಳ್ಳ ಭಟ್ಟಿ ಸಾರಾಯಿ ಅಡ್ಡೆಗೆ ದಾಳಿ: ಸಾರಾಯಿ, ಪರಿಕರಗಳ ವಶ

0

ಕಡಬ: ಅಕ್ರಮ ಕಳ್ಳ ಭಟ್ಟಿ ಸಾರಾಯಿ ತಯಾರಿಸುತ್ತಿರುವ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಐದು ಲೀಟರ್ ಸಾರಾಯಿ ಹಾಗೂ ಅದಕ್ಕೆ ಉಪಯೋಗಿಸಿದ ಪರಿಕರವನ್ನು ವಶಪಡಿಸಿಕೊಂಡ ಘಟನೆ ಕೊಕ್ಕಡ ಸಮೀಪದ ಪಟ್ರಮೆ ಗ್ರಾಮದ ಸಂಕೇಶ ಎಂಬಲ್ಲಿ ನಡೆದಿದೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಸಂಬಂಧ ನೀತಿ ಸಂಹಿತೆ ಜಾರಿ ಹಿನ್ನಲೆ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ತಡೆಯಲು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಅಬಕಾರಿ ಉಪ ಅಧೀಕ್ಷಕರು ಬಂಟ್ವಾಳ ಉಪವಿಭಾಗ ರವರ ನಿರ್ದೆಶನದಂತೆ ಗಸ್ತು ನಡೆಸುತ್ತಿರುವ ವೇಳೆ ಈ ಪ್ರಕರಣ ಪತ್ತೆಯಾಗಿದೆ.

ವಾಸವಿದ್ದ ಮನೆಯ ಹಿಂಬದಿಯಲ್ಲಿ ಅಕ್ರಮ ಚಟುವಟಿಕೆಗಳು ನಡೆಸುತ್ತಿದ್ದು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

 

 

ಅಬಕಾರಿ ನಿರೀಕ್ಷಕರು ಕೇಸ್ ದಾಖಲಿಸಿಕೊಂಡಿದ್ದು, ಸದ್ಯ ಕಳ್ಳಭಟ್ಟಿ ಸಾರಾಯಿಯನ್ನು ಸ್ಥಳದಿಂದ ವಶಕ್ಕೆ ಪಡೆಯಲಾಗಿದೆ. ವಶಪಡಿಸಲಾದ ಸೊತ್ತಿನ ಬೆಲೆ ಸುಮಾರು 5,200 ಎಂದು ಅಂದಾಜಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!