ಚಿತ್ರದುರ್ಗ: ಹಿರೇಹಳ್ಳಿ ಬಳಿ ಕಾರು ಪಲ್ಟಿಯಾಗಿ ಬಳ್ಳಾರಿ ಮೂಲದ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ (91) ಮೃತಪಟ್ಟ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಬಳಿ ಅಪಘಾತ ನಡೆದಿದ್ದು, ಕಾರಲ್ಲಿದ್ದ ವೀರಣ್ಣ ಅವರ ಪುತ್ರ ಹನುಮಂತಪ್ಪ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.