ದೆಹಲಿ: ವಾಯು ಮಾಲಿನ್ಯ ಹೆಚ್ಚಳ:
ಮುಂದಿನ ಆದೇಶದವರೆಗೆ ದೆಹಲಿಯಲ್ಲಿ ಶಾಲೆಗಳಿಗೆ ರಜೆ
ದೆಹಲಿ: ವಾಯು ಮಾಲಿನ್ಯ ಹೆಚ್ಚಳ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ದೆಹಲಿಯಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಆನ್ಲೈನ್ ತರಗತಿ ಮಾತ್ರ ನಡೆಸಲು ಅವಕಾಶ ನೀಡಲಾಗಿದ್ದು, ದೆಹಲಿ ಶಿಕ್ಷಣ ಇಲಾಖೆ ಈ ಕುರಿತು ಅಧಿಕೃತ ಘೋಷಣೆ ಮಾಡಿದೆ. ಮುಂದಿನ ಆದೇಶ ಬರುವವರೆಗೆ ಶಾಲೆಗಳನ್ನು ಮುಚ್ಚಲು ಪರಿಸರ ಇಲಾಖೆ ನಿರ್ದೇಶನ ನೀಡಿದೆ ಎಂದು ಹೆಚ್ಚುವರಿ ಶಿಕ್ಷಣ ನಿರ್ದೇಶಕಿ ರೀಟಾ ಶರ್ಮಾ ತಿಳಿಸಿದ್ದಾರೆ.
ಆನ್‌ಲೈನ್ ಬೋಧನಾ ಚಟುವಟಿಕೆಗಳು ಮತ್ತು ಬೋರ್ಡ್ ತರಗತಿಗಳಿಗೆ ಪರೀಕ್ಷೆಗಳನ್ನು ಮೊದಲೇ ನೀಡಲಾದ ಮಾರ್ಗಸೂಚಿಗಳ ಪ್ರಕಾರ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಳೆದ ವಾರ (ನವೆಂಬರ್ 13 ರಂದು) ಒಂದು ವಾರದವರೆಗೆ ಶಾಲೆಗಳನ್ನು ಮುಚ್ಚಲಾಗುವುದು ಎಂದು ಘೋಷಿಸಿದ್ದರು. ಹರಿಯಾಣ ಸರ್ಕಾರ ಕೂಡ ಗುರುಗ್ರಾಮ್, ಫರಿದಾಬಾದ್, ಸೋನಿಪತ್ ಮತ್ತು ಝಿಜಾರ್ ನಗರಗಳಲ್ಲಿ ಶಾಲೆಗಳನ್ನು ಮುಚ್ಚುವುದಾಗಿ ಘೋಷಿಸಿತ್ತು. ಇದೀಗ ದೆಹಲಿಯಲ್ಲಿ ಶಾಲೆಗಳಿಗೆ ರಜೆ ಮುಂದುವರೆದಿದೆ.





