ಮಂಗಳೂರು: ಜಿಲ್ಲಾ ಕಾರಾಗೃಹಕ್ಕೆ ಭಾರೀ ಸಂಖ್ಯೆಯ ಪೊಲೀಸರಿಂದ ದಿಢೀರ್ ದಾಳಿ, ತಪಾಸಣೆ
ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಭಾನುವಾರ ಭಾರೀ ಸಂಖ್ಯೆಯ ಪೊಲೀಸರು ದಿಢೀರ್ ತಪಾಸಣೆ ನಡೆಸಲಾಗಿದೆ.

ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ತಪಾಸಣೆ ನಡೆಸಲಾಗುತ್ತಿದ್ದು, ದಿಢೀರ್ ಆಗಿ ಸುಮಾರು 250 ಮಂದಿ ಪೊಲೀಸರು ಏಕಕಾಲಕ್ಕೆ ಆಗಮಿಸಿದ್ದಾರೆ.
ಇನ್ನು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ, ಡಿಸಿಪಿ ಅಂಶುಕುಮಾರ್ ಸಹಿತ ಹಿರಿಯ ಅಧಿಕಾರಿಗಳು ತಪಾಸಣೆ ಮಾಡಿಸುತ್ತಿದ್ದಾರೆ.




