February 3, 2026

ಉಡುಪಿ: ವಿದೇಶಿ ಕರೆನ್ಸಿ ನೀಡುವುದಾಗಿ ವಂಚಿಸಿ ಸುಲಿಗೆ: ಸೊತ್ತು ಸಹಿತ 6 ಮಂದಿಯ ಬಂಧನ

0
IMG-20230402-WA0030.jpg

ಉಡುಪಿ: ವಿದೇಶಿ ಕರೆನ್ಸಿ ನೀಡುವುದಾಗಿ ವಂಚಿಸಿ ಸುಲಿಗೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಬ್ರಹ್ಮಾವರ ಮತ್ತು ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತರನ್ನು ಉತ್ತರಪ್ರದೇಶ ಮೂಲದ ದೆಹಲಿ ಲಕ್ಷ್ಮೀನಗರದ ನಿವಾಸಿ ಮುಹಮ್ಮದ್ ಪೊಲಾಶ್ ಖಾನ್(42), ಮುಂಬೈಯ ಇಂದಿರಾನಗರ ನಿವಾಸಿ ಮುಹಮ್ಮದ್ ಮಹ್ತಾಬ್ ಬಿಲಾಲ್ ಶೇಖ್ (43), ಪಶ್ಚಿಮ ಬಂಗಾಳ ಮೂಲದ ನಾರ್ಥ್‌ ಈಸ್ಟ್ ದೆಹಲಿ ನಿವಾಸಿ ಮುಹಮ್ಮದ್ ಪಿರೋಝ್‌ (30), ಹರಿಯಾಣ ರಾಜ್ಯ ಫರಿದಾಬಾದ್ ನಿವಾಸಿ ನೂರ್ ಮುಹಮ್ಮದ್ (36), ಈಸ್ಟ್ ದೆಹಲಿಯ ಮೀರಜ್ ಖಾನ್ (32), ಮುಹಮ್ಮದ್ ಜಹಾಂಗೀರ್ (60) ಎಂದು ಗುರುತಿಸಲಾಗಿದೆ.

ಇನ್ನು ಬಂಧಿತ ಆರೋಪಿಗಳಿಂದ 32100 ದಿರಮ್ಸ್ ನ ವಿದೇಶ ಕರೆನ್ಸಿ ನೋಟುಗಳು, 19 ಮೊಬೈಲ್ ಫೋನ್, 6,29,000ರೂ. ನಗದು, ಮೂರು ಬೈಕ್, 30 ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.‌

ಸಾವರ್ಜನಿಕರ ಬಳಿ ವಿದೇಶಿ ದಿರಮ್ಸ್ ಕರೆನ್ಸಿ ಬದಲಾವಣೆ ಮಾಡಿಕೊಡುವ ಬಗ್ಗೆ ವಿಚಾರಿಸುವ ನೆಪದಲ್ಲಿ ಪರಿಚಯಿಸಿಕೊಂಡು, ಮೊದಲಿಗೆ ಒಂದು ನಿಜವಾದ ವಿದೇಶಿ ಕರೆನ್ಸಿ ನೀಡಿ ಸಾರ್ವಜನಿಕರನ್ನು ನಂಬಿಸಿ, ಬಳಿಕ ತಮ್ಮ ಬಳಿ ಇನ್ನೂ ಸಹ ಇಂತಹ ನೈಜ ದಿರಮ್ಸ್ ಕರೆನ್ಸಿಗಳಿದ್ದು ಕಡಿಮೆ ಮೌಲ್ಯಕ್ಕೆ ನೀಡುವುದಾಗಿ ನಂಬಿಸಿದ್ದರು.

ಇನ್ನು ತಾವು ಗುರುತು ಪಡಿಸಿದ ಸ್ಥಳಗಳಿಗೆ ಹಣದೊಂದಿಗೆ ಸಾರ್ವಜನಿಕರನ್ನು ಬರ ಮಾಡಿ ಕೊಂಡು ಬಟ್ಟೆ ಮತ್ತು ಸೋಪು ಇರಿಸಿದ ಗಂಟು ಹಾಕಿದ ಚೀಲದಲ್ಲಿ ವಿದೇಶೀ ಕರೆನ್ಸಿ ಇರುವುದಾಗಿ ನಂಬಿಸಿ ಚೀಲವನ್ನು ನೀಡಿ ಸಾವರ್ಜನಿಕರು ಪರಿಶೀಲಿಸುವ ಮೊದಲೇ ಅವರ ಕೈನಲ್ಲಿದ್ದ ಹಣದ ಚೀಲವನ್ನು ಸುಲಿಗೆ ಮಾಡಿ ಎಳೆದುಕೊಂಡು ಹೋಗಿದ್ದರು.

ಈ ಬಗ್ಗೆ ಬ್ರಹ್ಮಾವರ ಮತ್ತು ಕೋಟ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರ ವಿಶೇಷ ತಂಡವನ್ನು ರಚಿಸಲಾಗಿದ್ದು, ತಂಡವು ಪ್ರಕರಣದ ಆರೋಪಿಗಳ ಮಾಹಿತಿಯನ್ನು ಕಲೆ ಹಾಕಿ ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!