September 27, 2026

ಸಿಗ್ನಲ್ ಬಳಿ ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ: ಮಹಿಳೆ ಸಾವು

0
image_editor_output_image1035382893-1680476835349.jpg

ಬೆಂಗಳೂರು: ಲಾರಿಯೊಂದು ಬೈಕ್‌ಗೆ ಡಿಕ್ಕಿಯಾಗಿ ಮಹಿಳೆಯೊಬ್ಬಳು ಸಾವನ್ನಪ್ಪಿದ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಸಿಗ್ನಲ್‌ನ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ.

ವಿಜಯನಗರ ಬಳಿಯ ಅತ್ತಿಗುಪ್ಪೆ ಮೂಲದ ಅನುಷಾ ಸಾವನ್ನಪ್ಪಿದ ಮಹಿಳೆ. ಬೆಂಗಳೂರಿನ ನಾಯಂಡಹಳ್ಳಿ ಸಿಗ್ನಲ್‌ ಬಳಿ ಅತಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ.

 

ಪರಿಣಾಮ ಬೈಕ್‌ನಲ್ಲಿದ್ದ ಅನುಷಾ ಸಾವನ್ನಪ್ಪಿದ್ದಾರೆ. ಜೊತೆಗೆ ಬೈಕ್‌ನಲ್ಲಿದ್ದ ತಾಯಿ ವನಜಾಕ್ಷಿ ಸ್ಥಿತಿ ಗಂಭೀರವಾಗಿದ್ದು, ಕಾಲು ಕಟ್‌ ಆಗಿದೆ.

ಇನ್ನೂ 7 ವರ್ಷದ ಮಗ ಆರ್ಯನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!