March 22, 2026

ಪ್ರೀತಿ ಮಾಡಲು ನಿರಾಕರಿಸಿದ ಯುವತಿಯೊಂದಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಯುವಕ: ಯುವಕ‌ ಸಾವು: ಯುವತಿ ಗಂಭೀರ

0
image_editor_output_image-1620029133-1680477249073.jpg

ಬಾಗಲಕೋಟೆ: ಪ್ರೀತಿ ಮಾಡಲು ಒಲ್ಲೆ ಎಂದ ಯುವತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಲ್ಲದೇ ತಾನೂ ಬೆಂಕಿ ಹಚ್ಚಿಕೊಂಡಿದ್ದ ವಿಕೃತ ಪ್ರೇಮಿ ಮೃತಪಟ್ಟ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಇಲಕಲ್‌ನ ಗುಡೂರಿನಲ್ಲಿ ಈ ಘಟನೆ ನಡೆದಿದ್ದು, ಅಫ್ಜಲ್ ಸೊಲ್ಲಾಪುರ (27) ಮೃತ ಆರೋಪಿ. ಈತ ನೇತ್ರಾವತಿ ಎಂಬಾಕೆಯನ್ನು ಪ್ರೀತಿಸುತ್ತಿದ್ದ.

ನೇತ್ರಾವತಿಗೆ ಬೇರೊಂದು ಹುಡುಗನ ಜೊತೆ ಮದುವೆ ನಿಶ್ಚಯವಾಗಿತ್ತು. ಹೀಗಾಗಿ ತಾಳ್ಮೆ ಕಳೆದುಕೊಂಡ ಅಫ್ಜಲ್ ನೇತ್ರಾಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ನಂತರ ತಾನೂ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಫ್ಜಲ್‌ನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ನೇತ್ರಾವತಿಯನ್ನು ಬಾಗಲಕೋಟೆಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಗಂಭೀರ ಸ್ಥಿತಿಯಲ್ಲಿದ್ದ ಅಫ್ಜಲ್ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾನೆ.

Leave a Reply

Your email address will not be published. Required fields are marked *

error: Content is protected !!