March 22, 2026

ಕೊಣಾಜೆ: ಆಕಸ್ಮಿಕ ಬೆಂಕಿ ಅವಘಡ, ಹಂಚಿನ ಮನೆ ಸಂಪೂರ್ಣ ಬೆಂಕಿಗಾಹುತಿ

0
image_editor_output_image1873761720-1680478263617.jpg

ಕೊಣಾಜೆ : ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿ ದಿ. ಅಬ್ದುಲ್ ಖಾದ್ರಿ ಅವರ ಪತ್ನಿ ನೆಬಿಸಾ ಎಂಬವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಹಂಚಿನ ಮನೆಯು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ರವಿವಾರ ರಾತ್ರಿ ಸಂಭವಿಸಿದೆ.

ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ರಂಝಾನ್ ಉಪವಾಸದ ಪ್ರಯುಕ್ತ ಇಫ್ತಾರ್’ನಲ್ಲಿ ನಿರತವಾಗಿದ್ದ ಮನೆಯವರ ಸಮಯ ಪ್ರಜ್ಞೆಯಿಂದ ಪ್ರಾಣ ಹಾನಿಯಾಗಿರುವುದಿಲ್ಲ, ಆದರೆ ಮನೆಯು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಮನೆಯ ಪೀಠೋಪಕರಣಗಳು, ಪಾತ್ರೆಗಳು, ವಿದ್ಯುತ್ ಉಪಕರಣಗಳು, ಗೃಹ ಉಪಯೋಗಿ ಪರಿಕರಗಳು, ಮಕ್ಕಳ ಶಾಲಾ ಪಠ್ಯ ಪುಸ್ತಕ ಇನ್ನಿತರ ವಸ್ತುಗಳು ಸಂಪೂರ್ಣ ಭಸ್ಮಗೊಂಡಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದು ಶಾಸಕ ಯು ಟಿ ಖಾದರ್ ಭೇಟಿ ನೀಡಿದ್ದು, ಅದೇ ರೀತಿ ಸ್ಥಳೀಯ ಪಂಚಾಯತ್ ಪ್ರತಿನಿಧಿಗಳಾದ ರೆಹನಾ ನಝೀರ್, ಅನೀಸ್, ಹನೀಫ್, ರೆಹನಾ ಮುಹಮ್ಮದ್, ಅಬ್ದುಲ್ ಬಶೀರ್ ಎಸ್ .ಎಂ.‌ ಮತ್ತಿತರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕದಳ ಭೇಟಿ ನೀಡಿ, ಸ್ಥಳೀಯರೊಂದಿಗೆ ಸೇರಿಕೊಂಡು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

Leave a Reply

Your email address will not be published. Required fields are marked *

error: Content is protected !!