February 3, 2026

ಬೆಳ್ತಂಗಡಿ: ಹಲ್ಲೆ ನಡೆಸಿ, ಗೂಗಲ್ ಪೇ ಮೂಲಕ ಹಣ ವರ್ಗಾವಣೆ

0
image_editor_output_image338697581-1680500674787

ಬೆಳ್ತಂಗಡಿ: ಮನೆಯ ಯಜಮಾನನಿಗೆ ಹಲ್ಲೆ ನಡೆಸಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿ ಬಳಿಕ ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕದ್ದು ಪರಾರಿಯಾದ ಘಟನೆ ಪಡಂಗಡಿಯಲ್ಲಿ ನಡೆದಿದೆ.

ಪಡಂಗಡಿ ಗ್ರಾಮದ ಜಾನೆಬೈಲು ಪುತ್ಯೆ ಮನೆ ಎಂಬಲ್ಲಿ ಮನೆ ಯಜಮಾನ ಜುವಾಮ್‌ ಗೋವಿಯಸ್‌ ಅವರಿಗೆ ಹಲ್ಲೆ ನಡೆಸಿದ ಪರಿಚಿತರಾದ ರಿಯಾಜ್‌ ಮತ್ತು ಫೈಝಲ್‌ ಹಣ ಎಗರಿಸಿದ ಆರೋಪಿತರು.

ಜುವಾಮ್‌ ಗೋವಿಯಸ್‌ ಅವರು ತನ್ನ ಮಗನೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಮನೆಯಲ್ಲಿ ಈ ಹಿಂದೆ ರಬ್ಬರ್‌ ಟ್ಯಾಪಿಂಗ್‌ ಕೆಲಸ ಮಾಡುತ್ತಿದ್ದ ಪರಿಚಯದ ರಿಯಾಜ್‌ ಮತ್ತು ಫೈಝಲ್‌ ಬಂದು ಕಟ್ಟಿಗೆಯಿಂದ ಹಲ್ಲೆ ನಡೆಸಿದರು. ಬಳಿಕ ಫೋನ್‌ನಲ್ಲಿದ್ದ ಗೂಗಲ್‌ ಪೇ ಪಿನ್‌ ನಂಬರ್‌ ಪಡೆದು 82,000 ರೂ.ಗಳನ್ನು ಆರೋಪಿಗಳ ಪತ್ನಿಯರ ಹೆಸರಿನ ಖಾತೆಗೆ ವರ್ಗಾಯಿಸಿ ಮೊಬೈಲ್‌ ಮತ್ತು ಅಂಗಳದಲ್ಲಿ ನಿಲ್ಲಿಸಿದ್ದ 2,82,000 ರೂ. ಮೌಲ್ಯದ ತ್ರಿಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ಜುವಾಮ್‌ ಗೋವಿಯಸ್‌ ದೂರು ನೀಡಿದಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!