February 3, 2026

ವಿಧಾನಸಭಾ ಚುನಾವಣೆಯಿಂದ ಹಿಂದೆ ಸರಿದ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ: ಕುಂದಾಪುರ ಜನತೆ ಕೃತಜ್ಞತೆ ಸಲ್ಲಿಸಿದ ಶಾಸಕ

0
image_editor_output_image-275740733-1680538910392

ಕುಂದಾಪುರ, ಕರಾವಳಿಯ ಜನಪ್ರಿಯ ರಾಜಕಾರಣಿ, ಸರಳ ಮತ್ತು ಸಜ್ಜನಿಕೆಯ ಮೂಲಕ ಖ್ಯಾತಿ ಹೊಂದಿರುವ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಈ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸೋಮವಾರ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ನಾನು ಸ್ವಇಚ್ಚೆ ಯಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಶ್ರೀನಿವಾಸ್ ಶೆಟ್ಟಿ ಅವರು ಉಲ್ಲೇಖಿಸಿದ್ದಾರೆ. ನಾನು ಶಾಸಕನಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿ ಅತ್ಯಂತ ನಿಷ್ಠೆಯಿಂದ ನನ್ನ ಜವಾಬ್ದಾರಿ ನಿರ್ವಹಿಸಿದ್ದೇನೆ. ನನ್ನನ್ನು ಬಹು ನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ಕುಂದಾಪುರದ ಎಲ್ಲಾ ವರ್ಗದ ಜನತೆಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ” ಎಂದು ಬರೆದಿದ್ದಾರೆ.

”ಕುಂದಾಪುರ ಬಹಳಷ್ಟು ಗ್ರಾಮೀಣ ಭಾಗಗಳನ್ನು ಹೊಂದಿರುವ ಕ್ಷೇತ್ರವಾಗಿದ್ದು ಎಲ್ಲಾ ವರ್ಗದ ಮತದಾರರ ನೋವು, ನಲಿವುಗಳಿಗೆ ಸ್ಪಂದಿಸಿ ಜನರ ಆಶೋತ್ತರಗಳನ್ನು ಈಡೇರಿಸಿದ ಸಂತೃಪ್ತಿ ನನಗಿದೆ” ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!