March 23, 2026

ಮಂಗಳೂರು: ವಿವಿಧ ಠಾಣೆಗಳಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ: ನಾಲ್ವರು ಆರೋಪಿಗಳ ಬಂಧನ, ಸೊತ್ತು ಪೊಲೀಸರ ವಶಕ್ಕೆ

0
IMG-20230404-WA0023.jpg

ಮಂಗಳೂರು: ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ 4 ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 6 ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಮಂಗಳೂರು ನಗರದ ಗೂಡ್ ಶೆಡ್ ಪರಿಸರದಲ್ಲಿ ನಂಬರ್‌ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನಗಳನ್ನು ಗಿರಾಕಿಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ ರವರ ನೇತ್ರತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪಣಂಬೂರು ನಿವಾಸಿ ಮೊಹಮ್ಮದ್ ಸಿನಾನ್(19), ಮೊಹಮ್ಮದ್ ಸಾಹಿಲ್ ಬೆಂಗ್ರೆ(22), ಫೈಜಲ್ತೋಟ ಫೈಸಲ್(35), ಮೊಹಮ್ಮದ್ ಸಾಹಿಲ್(18) ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಿಂದ 6 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಂದ ವಶಪಡಿಸಿಕೊಂಡ ದ್ವಿಚಕ್ರ ವಾಹನಗಳ ಒಟ್ಟು ಮೌಲ್ಯ ರೂ. 2,15,000 ಎಂದು ಅಂದಾಜಿಸಲಾಗಿದೆ. ಆರೋಪಿಗಳನ್ನು ಮತ್ತು ವಶಪಡಿಸಿಕೊಂಡ ದ್ವಿಚಕ್ರ ವಾಹನಗಳನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗ್ಡೆ, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್‌ಐ ಸುದೀಪ್, ಶರಣಪ್ಪ ಭಂಡಾರಿ, ಎಎಸ್‌ಐ ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!