ಸಿ.ಟಿ ರವಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್: ಮೂವರ ವಿರುದ್ಧ FIR ದಾಖಲು
ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ ರವಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ದಾವಣಗೆರೆ ಹಾಗೂ ತುಮಕೂರು ಮೂಲದ ಮೂವರ ವಿರುದ್ಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜಕೀಯ ದುರುದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಾದೇಶಿಕ ಜಾತಿಗಳ ನಡುವೆ ಹಾಗೂ ವಿವಿಧ ವರ್ಗಗಳ ನಡುವೆ ವೈರತ್ವ ಮೂಡುವ ರೀತಿಯಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ.
ಪೋಸ್ಟ್ ಹಾಕಿದವರ ವಿರುದ್ಧ ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ ದೂರು ದಾಖಲಿಸಿದ್ದು, ದಾವಣಗೆರೆಯ ಹರೀಶ್ ಕೆಂಗನಹಳ್ಳಿ, ಗುರುಪಾಟೀಲ್ ಹಾಗೂ ತುಮಕೂರು ಮೂಲದ ಸುವರ್ಣಗಿರಿ ಕುಮಾರ್ ಎಂಬ ಮೂವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.





