December 15, 2025

ಚುನಾವಣಾ ಅಕ್ರಮ: 17 ಕೋಟಿ ನಗದು, 3 ಲಕ್ಷ ಲೀಟರ್ ಮದ್ಯ ವಶಕ್ಕೆ

0
Screenshot_2023-04-05-04-57-32-00_680d03679600f7af0b4c700c6b270fe7.jpg

ಬೆಂಗಳೂರು: ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಸೇರಿ ಒಟ್ಟು 17,36,04,076 ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.

ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್‌ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಸೇರಿ ಒಟ್ಟು ಸೇರಿ 22,35,85,130 ರೂ. ಮೌಲ್ಯದ 3,27,604 ಲೀಟರ್ ಮದ್ಯ ಜಪ್ತಿ ಮಾಡಿದ್ದಾರೆ.

42,66,910- ಮೌಲ್ಯದ 82.85 ಕೆ.ಜಿ ಮಾದಕ ದ್ರವ್ಯಗಳನ್ನು ಸೀಜ್ ಮಾಡಲಾಗಿದೆ.ಅಬಕಾರಿ ಇಲಾಖೆಯು 584 ಗಂಭೀರ ಪ್ರಕರಣಗಳನ್ನು ಹಾಗೂ ಮದ್ಯದ ಪರವಾನಗಿ ಉಲ್ಲಂಘಿಸಿದ 373 ಪ್ರಕರಣಗಳು, 16 ಎನ್‌ಡಿಪಿಎಸ್ ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1965ರ ಪರಿಚ್ಛೇದ 15 (ಎ) ಅನ್ವಯ ಒಟ್ಟು 1,560 ಪ್ರಕರಣಗಳನ್ನು ದಾಖಲಿಸಿವೆ. 357 ವಿವಿಧ ಮಾದರಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿ 8,50,61,733 ರೂ. ಮೌಲ್ಯದ 22.691 ಕೆ.ಜಿ ಚಿನ್ನ, 65,19,560 ರೂ. ಮೌಲ್ಯದ 93.563 ಕೆ.ಜಿ ಬೆಳ್ಳಿಯನ್ನು ವಶಪಡಿಸಿಕೊಂಡಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

error: Content is protected !!