December 15, 2025

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಬಂಧನ

0
image_editor_output_image1726841157-1680651477616.jpg

ನ್ಯೂಯಾರ್ಕ್: ನೀಲಿಚಿತ್ರ ತಾರೆಗೆ ಹಣ ಸಂದಾಯ ಮಾಡಿದ್ದ ಕ್ರಿಮಿನಲ್‌ ಪ್ರಕರಣದ ಸಂಬಂಧ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಇದಕ್ಕೂ ಮುನ್ನ ಮ್ಯಾನ್‌ಹಾಟನ್‌ ಜಿಲ್ಲಾ ಅಟಾರ್ನಿಯ ಕೋರ್ಟ್‌ ಸಭಾಂಗಣದಲ್ಲಿ 76 ವರ್ಷ ವಯಸ್ಸಿನ ಟ್ರಂಪ್‌ ಶರಣಾದರು. ಬಳಿಕ ಅವರನ್ನು ಬಂಧಿಸಿ ಬಿಗಿ ಭದ್ರತೆಯಲ್ಲಿ ವಿಚಾರಣೆಗೆ ಕರೆದುಕೊಂಡು ಹೋಗಲಾಯಿತು ಎಂದು ಬಿಬಿಸಿ ವರದಿ ಮಾಡಿದೆ.

ಅಮೆರಿಕದ ಇತಿಹಾಸದಲ್ಲೇ ಕ್ರಿಮಿನಲ್‌ ಆರೋಪ ಪ್ರಕರಣದ ವಿಚಾರಣೆ ಎದುರಿಸಿದ, ಬಂಧನಕ್ಕೆ ಒಳಗಾದ ಮೊದಲ ಅಧ್ಯಕ್ಷ ಟ್ರಂಪ್‌ ಆಗಿದ್ದಾರೆ.

‘ನಮ್ಮ ನಡುವಿನ ಅನೈತಿಕ ಸಂಬಂಧ ಬಹಿರಂಗಪಡಿಸಬಾರದು’ ಎಂದು ನೀಲಿಚಿತ್ರ ತಾರೆಯೊಬ್ಬರಿಗೆ ಹಣ ಸಂದಾಯ ಮಾಡಿದ್ದ ಕುರಿತಂತೆ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

‘ಕಾನೂನು ಸಲಹಾ ಸಿಬ್ಬಂದಿ ಜೊತೆ ಬಂದಿದ್ದ ಟ್ರಂಪ್‌ ಅವರು, ಕ್ರಿಮಿನಲ್‌ ಆರೋಪ ಪ್ರಕರಣದಲ್ಲಿ ನನ್ನ ತಪ್ಪಿಲ್ಲ. ನಾನು ನಿರ್ದೋಷಿ’ ಎಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜುವಾನ್ ಮರ್ಚನ್ ಅವರಿಗೆ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!