ಉಡುಪಿ: ಎಂಐಟಿ ವಿದ್ಯಾರ್ಥಿ ಹಾಸ್ಟೆಲ್ ನಲ್ಲ ನೇಣು ಬಿಗಿದು ಆತ್ಮಹತ್ಯೆ
ಉಡುಪಿ: ಮಣಿಪಾಲ ಎಂಐಟಿ ವಿದ್ಯಾರ್ಥಿಯೋರ್ವ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಆದಿತ್ಯಾ ಕುಮಾರ್ ದಾಸ್ ಗುಪ್ತಾ ಎಂಬವರ ಮಗ ಅನೀಶ್ ದಾಸ್ ಗುಪ್ತಾ (22) ಎಂದು ಗುರುತಿಸಲಾಗಿದೆ.
ಮಣಿಪಾಲದ ಎಂಐಟಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಇವರು, ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ತಾನು ವಾಸವಿದ್ದ ಹಾಸ್ಟೆಲ್‌ನ ಬಾತ್ ರೂಮ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.






