ಇದ್ರೀಸ್ ಪಾಷಾ ಹತ್ಯೆ ಪ್ರಕರಣ: ಪುನೀತ್ ಕೆರೆಹಳ್ಳಿ ಸಹಿತ ಐವರು ಆರೋಪಿಗಳ ಬಂಧನ
ಕನಕಪುರದ ಸಾತನೂರು ಸಮೀಪ ಗೋಸಾಗಾಟ ವೇಳೆ ನಡೆದ ಇದ್ರೀಸ್ ಪಾಷಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಕನಕಪುರ ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಮಂಡ್ಯ ಮೂಲದ ಇದ್ರೀಸ್ ಪಾಷಾ ಅವರನ್ನು ಹತ್ಯೆ ಮಾಡಲಾಗಿತ್ತು.
ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ವೇಳೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ವಾಹನ ತಡೆದಿದೆ. ಈ ವೇಳೆ ಅದರಲ್ಲಿ ಇದ್ದ ಇದ್ರೀಸ್ ಪಾಷಾ ಮತ್ತೊಬ್ಬರು ತಪ್ಪಿಸಿಕೊಂಡಿದ್ದರು. ಘಟನೆ ನಡೆದ ಸ್ಥಳದಿಂದ ಸ್ವಲ್ಪ ದೂರದಲ್ಲಿಯೇ ಇದ್ರೀಸ್ ಶವ ಪತ್ತೆಯಾಗಿತ್ತು. ಅವರನ್ನು ಕೆರೆಹಳ್ಳಿ ತಂಡ ಥಳಿಸಿ ಹತ್ಯೆ ಮಾಡಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರರನ್ನು ಸಾತನೂರು ಠಾಣೆ ಪೊಲೀಸರು ಬುಧವಾರ ರಾಜಸ್ಥಾನದಲ್ಲಿ ಬಂಧಿಸಿದ್ದಾರೆ.






