ದೇವಾಲಯದ ಸಿಸಿ ಕ್ಯಾಮರಾಗೆ ಬಟ್ಟೆ ಮುಚ್ಚಿ ಹುಂಡಿಯಲ್ಲಿದ್ದ ಹಣ ಕಳ್ಳತನ
ರಾಮನಗರ: ದೇವಾಲಯದ ಸಿಸಿ ಕ್ಯಾಮೆರಾಗೆ ಬಟ್ಟೆ ಮುಚ್ಚಿ ಹುಂಡಿಯಲ್ಲಿದ್ದ ಹಣ ಕಳ್ಳತನ ಮಾಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ನೀಲಸಂದ್ರ ಗ್ರಾಮದ ಭೈರವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ.
ಮೊನ್ನೆಯಷ್ಟೇ ಶ್ರೀಭೈರವೇಶ್ವರ ಸ್ವಾಮಿ ದೇವರ ಜಾತ್ರೆ ಅದ್ದೂರಿಯಾಗಿ ನೆರವೇರಿತ್ತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದ ಹಿನ್ನೆಲೆ ದೇವಾಲಯದ ಹುಂಡಿಯಲ್ಲಿ ಹೆಚ್ಚು ಹಣ ಸಂಗ್ರಹವಾಗಿತ್ತು ಎನ್ನಲಾಗಿದೆ.
ಇದನ್ನು ಗಮನಿಸಿದ್ದ ದೇವಾಲಯದ ಅರ್ಚಕರು ಮಂಗಳವಾರ ರಾತ್ರಿ ಸಿಸಿಟಿವಿಗೆ ಬಟ್ಟೆ ಮುಚ್ಚಿ ಹುಂಡಿಯಿಂದ ಸುಮಾರು 2 ಲಕ್ಷಕ್ಕೂ ಹೆಚ್ಚು ಹಣ ದೋಚಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.





