ಕ್ರಿಕೆಟಿಗ ಪೃಥ್ವಿ ಶಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಸಪ್ನಾ ಗಿಲ್
ಮುಂಬೈ: ಸಾಮಾಜಿಕ ಮಾಧ್ಯಮದ ಪ್ರಭಾವಿ ಸಪ್ನಾ ಗಿಲ್ ಅವರು ಕ್ರಿಕೆಟಿಗ ಪೃಥ್ವಿ ಶಾ ಮತ್ತು ಅವರ ಸ್ನೇಹಿತ ಆಶಿಶ್ ಸುರೇಂದ್ರ ಯಾದವ್ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿದ್ದಾರೆ.
ಸಪ್ನಾ ಗಿಲ್ ಐಪಿಸಿಯ ಸೆಕ್ಷನ್ 354, 509, 324 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಸಪ್ನಾ ಗಿಲ್ ಪೃಥ್ವಿ ಶಾ ಮತ್ತು ಆಶೀಶ್ ಯಾದವ್ ವಿರುದ್ಧ ಅಂಧೇರಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಲೈಂಗಿಕ ದೌರ್ಜನ್ಯದ ಕೇಸು ದಾಖಲಿಸಿದ್ದಾರೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಕೋರ್ಟ್, ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಕಿರುಕುಳ ಮತ್ತು ಬ್ಯಾಟ್‌ನಿಂದ ಹೊಡೆಯುವುದು ಸೇರಿದಂತೆ ಹಲವು ಪ್ರಕರಣಗಳಲ್ಲಿ ಪೃಥ್ವಿ ಶಾ ಮತ್ತು ಅವರ ಸ್ನೇಹಿತನ ವಿರುದ್ಧ ಸಪ್ನಾ ಗಿಲ್ ದೂರು ದಾಖಲಿಸಿದ್ದಾರೆ.
ಅಷ್ಟೇ ಅಲ್ಲ, ಈ ಪ್ರಕರಣಗಳನ್ನು ದಾಖಲಿಸಿಕೊಳ್ಳುವಾಗ ಸಪ್ನಾ ಸರ್ಕಾರಿ ಆಸ್ಪತ್ರೆಯ ವೈದ್ಯಕೀಯ ಪ್ರಮಾಣಪತ್ರವನ್ನೂ ನೀಡಿದ್ದು, ಅದರಲ್ಲಿ ಲೈಂಗಿಕ ಶೋಷಣೆಯ ಬಗ್ಗೆ ನಮೂದಿಸಲಾಗಿದೆ.





