February 3, 2026

ಬಂಟ್ವಾಳ: ಬಿ.ಸಿ.ರೋಡ್ ಸಮೀಪ ಬಯಲು ಪ್ರದೇಶ ಆಕಸ್ಮಿಕ ಬೆಂಕಿ

0
image_editor_output_image-968482551-1680781126334.jpg

ಬಂಟ್ವಾಳ : ದಕ್ಷಿಣ ಕನ್ನಡದ ಬಂಟ್ವಾಳ ಬಿಸಿರೋಡ್ ಸಮೀಪ ಬಯಲು ಪ್ರದೇಶ ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದಿದ್ದು ಬೆಂಕಿ ಮತ್ತು ಹೊಗೆಯಿಂದ ಸ್ಥಳಿಯ ಪ್ರದೇಶದಲ್ಲಿ ಕೆಲ ಕಾಲ ಆತಂಕ ಮನೆ ಮಾಡಿತ್ತು.

ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ದಟ್ಟವಾದ ಹೊಗೆ ಆವರಿಸಿದ್ದು ಇದರಿಂದ ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಕೆಲ ಕಾಲ ಬಂದ್ ಆಗಿತ್ತು.

ರಸ್ತೆ ತುಂಬಾ ಹೊಗೆ ತುಂಬಿದ್ದು, ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು.

ರಸ್ತೆಯ ಎರಡೂ ಬಾಗದಲ್ಲಿ ಕಸದ ರಾಶಿ ಬಿದ್ದಿದ್ದು ಕಸದ ರಾಶಿಗೆ ಯಾರೋ ಬೆಂಕಿ ಹಾಕಿದ ಬೇಕು ಎಂದು ಹೇಳಲಾಗುತ್ತಿದೆಯಾದರೂ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ.

‌‌ ಬಿಸಿರೋಡು ಮುಖ್ಯ ಪೇಟೆ ಹಾಗೂ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಇಕ್ಕೆಲಗಳಲ್ಲಿ ಬೆಂಕಿ ಬಿದ್ದ ಕಾರಣ ಕೆಲ ಹೊತ್ತು ಆತಂಕದ ವಾತವರಣ ನಿರ್ಮಾಣ ವಾಗಿತ್ತು.

Leave a Reply

Your email address will not be published. Required fields are marked *

error: Content is protected !!