ಮಂಗಳೂರು: ದ್ವಿಚಕ್ರವಾಹನ ದಿಂದ ಬಿದ್ದು ಮಹಿಳೆ ಮೃತ್ಯು
ಮಂಗಳೂರು : ದ್ವಿಚಕ್ರವಾಹನ ದಿಂದ ಮಹಿಳೆಯೋರ್ವರು ಬಿದ್ದು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ.
ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ,
ಕಾರ್ಕಳದಿಂದ ಕಟೀಲಿಗೆ ತನ್ನ ಪತಿಯ ದ್ವಿಚಕ್ರ ವಾಹನದಲ್ಲಿ ಬೆಳಿಗ್ಗೆ 5.30 ಬರುತ್ತಿದ್ದ ಸಂದರ್ಭ ಕಲ್ಲಕುಮೇರು ಬಳಿ ಹಂಪ್ಸ್ ಗಮನಿಸದ ಪತಿ ಒಂದೇ ವೇಗದಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಅವೈಜ್ಞಾನಿಕ ಕಂಪ್ಸ್ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ಹಿಂಬದಿ ಸವಾರರಾಗಿದ್ದ ಪತ್ನಿ ಮಮತಾ ಶೆಟ್ಟಿ ಆಯಾ ತಪ್ಪಿ ದ್ವಿಚಕ್ರ ವಾಹನದಿಂದ ಕೆಳಕ್ಕೆ ಎಸೆಯಲ್ಪಟ್ಟಿದ್ದಾರೆ,
ಕೂಡಲೇ ಸಮೀಪದ ಅಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಶೆಟ್ಟಿ ಮೃತ ಪಟ್ಟಿದ್ದಾರೆ.
ಸ್ಥಳಿಯರಾದ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಂದರ ನಿಡ್ಡೋಡಿ, ಅಭಿಲಾಷ್ ಶೆಟ್ಟಿ ಕಟೀಲು ಅಸ್ಪತ್ರೆಗೆ ಭೇಟಿ ನೀಡಿ ಸಹಕರಿಸಿದ್ದಾರೆ.
ಮಮತಾ ಶೆಟ್ಟಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದರು ಎಂದು ತಿಳಿದು ಬಂದಿದೆ.




