February 3, 2026

ಮಂಗಳೂರು: ಎಂಟು ವರ್ಷದ ಮಗುವಿನ ಮೇಲೆ ಅತ್ಯಾಚಾರಗೈದು ಕೊಲೆ:
ಉಳಾಯಿಬೆಟ್ಟು ಟೈಲ್ಸ್ ಫ್ಯಾಕ್ಟರಿಯಲ್ಲಿ ನಡೆದ ಘಟನೆ

0
IMG-20211121-WA0024.jpg

ಮಂಗಳೂರು: ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಬಳಿಯ ಪರಾರಿ ಎಂಬಲ್ಲಿ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರ ಎಂಟು ವರ್ಷದ ಮಗುವನ್ನು ಅತ್ಯಾಚಾರಗೈದು ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.

ರಾಜ್ ಟೈಲ್ಸ್ ಎನ್ನುವ ಹೆಸರಿನ ಇಂಟರ್ಲಾಕ್ ಕಾರ್ಖಾನೆ ಆವರಣದಲ್ಲಿ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕರು ಅಲ್ಲಿ ಕೆಲಸ ಮಾಡುತ್ತಿದ್ದರು. ಕುಟುಂಬದ ಒಂದು ಮಗು ಸಂಜೆ ವೇಳೆಗೆ ಕಾಣೆಯಾಗಿತ್ತು. ಕಾರ್ಮಿಕರು, ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಸಂಜೆ 6 ಗಂಟೆ ಸುಮಾರಿಗೆ ಅಲ್ಲಿಯೇ ಪಕ್ಕದ ಚರಂಡಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ.

ಕಂಕನಾಡಿ ಗ್ರಾಮಾಂತರ ಪೊಲೀಸರು ಆಗಮಿಸಿ, ಶವವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಕಮಿಷನರ್ ಶಶಿಕುಮಾರ್, ಟೈಲ್ಸ್ ಫ್ಯಾಕ್ಟರಿಯಲ್ಲಿ 30ರಷ್ಟು ಜನ ಕೆಲಸ ಮಾಡುತ್ತಾರೆ. ಇಂದು ಭಾನುವಾರ ಆಗಿದ್ದರಿಂದ 19 ಜನ ಕೆಲಸಕ್ಕೆ ಬಂದಿದ್ದರು. ಸಂಜೆ ಹೊತ್ತಿಗೆ ಈ ಘಟನೆ ನಡೆದಿದ್ದು, ಕೊಲೆ ಪ್ರಕರಣ ದಾಖಲು ಮಾಡಿದ್ದೇವೆ. ಹಲವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಅತ್ಯಾಚಾರ ನಡೆದಿದೆಯೇ ಎನ್ನುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ವೈದ್ಯರು ತಪಾಸಣೆ ಬಳಿಕ ಮಾಹಿತಿ ನೀಡಲಿದ್ದಾರೆ ಎಂದು ಕಮಿಷನರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!