February 3, 2026

ನನ್ನ ಪುತ್ರ ಅನಿಲ್‌ ಬಿಜೆಪಿಗೆ ಸೇರ್ಪಡೆಗೊಂಡಿರುವುದು ನೋವುಂಟು ಮಾಡಿದೆ: ಕಾಂಗ್ರೆಸ್ ನಾಯಕ ಎ.ಕೆ ಆಂಟನಿ

0
IMG-20230406-WA0022.jpg

ನವದೆಹಲಿ: ನನ್ನ ಪುತ್ರ ಅನಿಲ್ ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ನನಗೆ ನೋವು ತಂದಿದೆ, ಇದು ತಪ್ಪು ನಿರ್ಧಾರ ಎಂದು ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಹೇಳಿದ್ದಾರೆ.

ಅನಿಲ್ ಆಂಟನಿ ಅವರು ಇಂದು ಕಾಂಗ್ರೆಸ್ ತೊರೆದು ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ವಿ ಮುರಳೀಧರನ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಇನ್ನು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಎಕೆ ಆಂಟನಿ, ಭಾರತದ ಆಧಾರವೆಂದರೆ ಏಕತೆ ಮತ್ತು ಧಾರ್ಮಿಕ ಸಾಮರಸ್ಯ. 2014 ರ ನಂತರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅವರು ವ್ಯವಸ್ಥಿತವಾಗಿ ವೈವಿಧ್ಯತೆ ಮತ್ತು ಜಾತ್ಯತೀತತೆಯನ್ನು ದುರ್ಬಲಗೊಳಿಸುತ್ತಿದ್ದಾರೆ. ಬಿಜೆಪಿ ಏಕರೂಪತೆಯನ್ನು ಮಾತ್ರ ನಂಬುತ್ತದೆ. ಅವರು ದೇಶದ ಸಾಂವಿಧಾನಿಕ ಮೌಲ್ಯಗಳನ್ನು ನಾಶಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!