February 3, 2026

ಮಂಗಳೂರು: 16ರಂದು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ: ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮಾಹಿತಿ

0
dc-ravi.jpg

ಮಂಗಳೂರು: ಏ.16ರಂದು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಕರ್ತವ್ಯಕ್ಕೆ ನಿಯೋಜಿಸಿರುವ ಮತಗಟ್ಟೆ ಅಧಿಕಾರಿ ಮತು ಸಹಾಯಕ ಮತಗಟ್ಟೆ ಅಧಿಕಾರಿಗಳು, ಪದವಿ ಪೂರ್ವ ಪರೀಕ್ಷೆಯ ಮೌಲ್ಯಮಾಪನ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿರುವ ಕಾರಣ ಹಲವು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿಗೆ ಹಾಜರಾಗಲು ಸಾಧ್ಯವಾಗುವುದಿಲ್ಲ. ಆದ ಕಾರಣ ಮತಗಟ್ಟೆ ಅಧಿಕಾರಿಗಳ ತರಬೇತಿಯನ್ನು ಈಗಾಗಲೇ ನಿಗಧಿಪಡಿಸಿರುವ ಸ್ಥಳದಲ್ಲಿ ಇದೇ ಏ.16ರ ಭಾನುವಾರಕ್ಕೆ ಮುಂದೂಡಲಾಗಿದೆ. ತರಬೇತಿಗೆ ಎಲ್ಲರೂ ಕಡ್ಡಾಯವಾಗಿ ಹಾಜರಾಗುವಂತೆ ಜಿಲ್ಲಾ ಚುನವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!