February 3, 2026

‘ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ನೀಡಿರುವುದು ನೋವಾಗಿದೆ’: ಬೇಸರ ವ್ಯಕ್ತಪಡಿಸಿದ ನಟ ಪ್ರಕಾಶ್ ರಾಜ್

0
IMG-20230406-WA0024.jpg

ಬೆಂಗಳೂರು: “ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಟ ಕಿಚ್ಚ ಸುದೀಪ್ ಅವರು ಬೆಂಬಲ ನೀಡಿರುವುದು ನನಗೆ ನೋವಾಗಿದೆ” ಎಂದು ನಟ ಪ್ರಕಾಶ್ ರಾಜ್ ತಿಳಿಸಿದ್ದಾರೆ.

ಸಿಎಂಗೆ ಬೆಂಬಲ್ ಸೂಚಿಸಿ ಬಿಜೆಪಿ ಪಕ್ಷದ ಪರವಾಗಿ ಪ್ರಚಾರ ಮಾಡುವುದಾಗಿ ಸುದೀಪ್ ಘೋಷಿಸಿರುವ ಕುರಿತು ಪ್ರತಿಕ್ರಿಯಿಸಿದ ಪ್ರಕಾಶ್, “ಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ ನೀಡಿರುವುದು ನನಗೆ ದಿಗ್ಭ್ರಮೆ ತಂದಿದೆ ಮತ್ತು ನೋವಾಗಿದೆ” ಎಂದಿದ್ದಾರೆ.

ಇನ್ನು ಏಪ್ರಿಲ್‌ 5ರಂದು ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಸುದ್ದಿಗೋಷ್ಠಿ ನಡೆಸಲಿದ್ದು ಸುದೀಪ್ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಕುರಿತಾಗಿ ನಟ ಪ್ರಕಾಶ್‌ ರಾಜ್‌ ಪ್ರತಿಕ್ರಿಯೆ ನೀಡಿ ಇದು ಕರ್ನಾಟಕದಲ್ಲಿ ಹತಾಶ, ಸೋತ ಬಿಜೆಪಿಯಿಂದ ಹರಡಿದ ಸುಳ್ಳು ಸುದ್ದಿ ಎಂದು ನಾನು ಬಲವಾಗಿ ನಂಬುತ್ತೇನೆ. ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂದು ಬರೆದುಕೊಂಡಿದ್ದರು. ಆದರೆ ಇದೀಗ ಸುದೀಪ್ ಅವರು ಬಿಜೆಪಿ ಬೆಂಬಲ ನೀಡುವುದಾಗಿ ಹೇಳಿರುವುದು ನನಗೆ ಬೇಸರ ತಂದಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!