February 2, 2026

ಕಟಪಾಡಿ: ಕುಂಜಾರುಗಿರಿ ಶ್ರೀ ದುರ್ಗಾ ದೇವಿ ದೇವಸ್ಥಾನದ ನೆಡುತೋಪು ಪ್ರದೇಶದಲ್ಲಿ ಬೆಂಕಿ: ಬೆಂಕಿ ಹತೋಟಿಗೆ ತರಲು ಹರಸಾಹಸ

0
image_editor_output_image420522047-1680824745091.jpg

ಕಟಪಾಡಿ: ಕುಂಜಾರುಗಿರಿ ಶ್ರೀ ದುರ್ಗಾ ದೇವಿ ದೇವಸ್ಥಾನದ ಉತ್ತರ ಭಾಗದ ತಪ್ಪಲಿನ ನೆಡುತೋಪು ಪ್ರದೇಶದಲ್ಲಿ ರಾತ್ರಿಯಲ್ಲಿಯೂ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಮತ್ತು ಜಿಲ್ಲಾ ಆಗ್ನಿಶಾಮಕದಳ ಬೆಂಕಿ ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ.

ಕುಂಜಾರುಗಿರಿಯ ಬಾಣತೀರ್ಥ ಪ್ರದೇಶದ ಮೇಲ್ಭಾಗದಲ್ಲಿನ ನೆಡು ತೋಪು ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಮಧ್ಯಾಹ್ನ 3.30ರ ಸುಮಾರಿಗೆ ಗಮನಕ್ಕೆ ಬಂದಿತ್ತು.

ಕೂಡಲೇ ಸ್ಥಳೀಯರ ಸಹಕಾರ ಮತ್ತು ಜಿಲ್ಲಾ ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದ ಬೆಂಕಿಯನ್ನು ತಹಬಂದಿಗೆ ತರಲಾಗಿತ್ತು.

ಆದರೆ ಬಳಿಕ ರಾತ್ರಿ 8 ಗಂಟೆಯ ವೇಳೆಗೆ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬಂದಿಗಳು ಮತ್ತೆ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!