ಟ್ಯಾಂಕರ್, ಕಾರಿನ ನಡುವೆ ಮುಖಾಮುಖಿ ಢಿಕ್ಕಿ: ಕಾರವಾರದ ಐವರು ಬಿಜೆಪಿ ಕಾರ್ಯಕರ್ತರಿಗೆ ಗಾಯ
ಶಿರಸಿ: ಟ್ಯಾಂಕರ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾಗಿ ಕಾರವಾರದ ಐವರು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿರುವ ಘಟನೆ ತಾಲೂಕಿನ ಹಾರುಗಾರ್ ಬಳಿ ಶುಕ್ರವಾರ ನಡೆದಿದೆ.
ಕಾರಿನಲ್ಲಿದ್ದ ಕಾರವಾರದ ಬಿಜೆಪಿ ಕಾರ್ಯಕಾರಿಣಿ ಸದಸ್ಯ ನಿತಿನ್ ರಾಯ್ಕರ್ ಎಂಬುವವರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡಕ್ಕೆ ರವಾನಿಸಲಾಗಿದೆ.
ಗಜಾನನ ರೇವಣಕರ್, ಸಂದೇಶ ಶೆಟ್ಟಿ, ವಿ.ಎಂ. ಹೆಗಡೆ , ಉಲ್ಲಾಸ ಖೇಣಿ ಎಂಬುವವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ಶಿರಸಿ ಪಂಡಿತ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಸಿಯಲ್ಲಿ ನಡೆದ ಜಿಲ್ಲಾ ಕಾರ್ಯಾಗಾರವನ್ನು ಮುಗಿಸಿ ಕಾರವಾರಕ್ಕೆ ಹೋಗುವಾಗ ಈ ಅಪಘಾತ ಸಂಭವಿಸಿದೆ.




