March 23, 2026

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

0
image_editor_output_image-871143418-1680909476538.jpg

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್‌, ಗದಗ, ಹಾವೇರಿ, ವಿಜಯಪುರ, ಧಾರವಾಡ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಇರಲಿದ್ದು, ರಾತ್ರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಗುರುವಾರ ರಾತ್ರಿ ಹಾಗೂ ಶುಕ್ರವಾರ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಲಬುರಗಿ ಜಿಲ್ಲೆಯ ಕಮಲಾಪುರ, ಯಡ್ರಾಮಿ, ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ 5 ಸೆಂ.ಮೀ, ಕಲಬುರಗಿಯ ಆಳಂದ, ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ 4 ಸೆಂ.ಮೀ ಮಳೆಯಾಗಿದೆ.

Leave a Reply

Your email address will not be published. Required fields are marked *

error: Content is protected !!