February 2, 2026

ಬಂಟ್ವಾಳ: ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು: ಓರ್ವ ಮೃತ್ಯು

0
Screenshot_2023-04-08-12-15-23-72_680d03679600f7af0b4c700c6b270fe7.jpg

ಬಂಟ್ವಾಳ: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ.

ನಂದರಬೆಟ್ಟು ನಿವಾಸಿ ಸದಾಶಿವ ಆಚಾರ್ಯ (77) ಮೃತಪಟ್ಟ ವ್ಯಕ್ತಿ. ಜೊತೆಗೆ ಸದಾಶಿವ ಅವರ ಮೊಮ್ಮಗ ಚಾಲಕ ಆಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ದೇವರ ಕಾರ್ಯದಲ್ಲಿ ಭಾಗಿಯಾಗಿ ಕಾರಿನಲ್ಲಿ ವಾಪಾಸು ಮನೆಗೆ ಬರುವ ವೇಳೆ ಬಿಸಿರೋಡಿನ ಅಜ್ಜಿಬೆಟ್ಟು ಕ್ರಾಸ್ ಸಮೀಪದಲ್ಲಿ ಈ ಅವಘಡ ಸಂಭವಿಸಿದೆ. ಪುತ್ತೂರಿನಲ್ಲಿರುವ ಸಂಬಂಧಿಕರ ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮನೆಗೆ ಇನ್ನೇನು ಕೇವಲ 5 ನಿಮಿಷಗಳ ಕಾಲದಲ್ಲಿ ಮುಟ್ಟುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿ ಚಾಲಕ ಸೇರಿ ನಾಲ್ಕು ಜನ ಒಂದೇ ಮನೆಯವರು ಪ್ರಯಾಣಿಸುತ್ತಿದ್ದರು.

ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

error: Content is protected !!