ಕಾಸರಗೋಡು: ನಂಬರ್ ಅಳವಡಿಸದ ಬೈಕ್‌ನಲ್ಲಿ ಗಾಂಜಾ ಸಾಗಾಟ: ಇಬ್ಬರು ಪೊಲೀಸರ ವಶಕ್ಕೆ
ಕಾಸರಗೋಡು: ಎರಡು ಕಿಲೋ ಗಾಂಜಾ ಸಹಿತ ಇಬ್ಬರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.
ಮಂಜೇಶ್ವರ ಕುಂಜತ್ತೂರಿನ ಅಲ್ಲಮ ಇಕ್ಬಾಲ್ (20) ಮತ್ತು ಮುಹಮ್ಮದ್ ಫಯಾಜ್ (20) ಬಂಧಿತರು.
ನಂಬರ್ ಅಳವಡಿಸದ ಬೈಕ್‌ನಲ್ಲಿ ಬರುತ್ತಿದ್ದ ಇಬ್ಬರನ್ನು ಮಂಜೇಶ್ವರ ಬಳಿ ತಡೆದು ವಿಚಾರಿಸಿದಾಗ ಅಸ್ಪಷ್ಟ ಉತ್ತರ ನೀಡಿದ್ದು, ಇವರ ಬಳಿ ಇದ್ದ ಪ್ಲಾಸ್ಟಿಕ್ ಕವರನ್ನು ಪರಿಶೀಲಿಸಿದಾಗ ಗಾಂಜಾ ಪತ್ತೆಯಾಗಿದೆ.




