February 3, 2026

ಕಾಸರಗೋಡು: ಗಾಂಜಾ ಸಾಗಾಟ, 2 ಕೆ.ಜಿ. ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ

0
image_editor_output_image230272694-1680952733700.jpg

ಕಾಸರಗೋಡು : ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೇರಳ ಕಾಸರಗೋಡಿನ ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಮಂಜೇಶ್ವರ ಕುಂಜತ್ತೂರು ನಿವಾಸಿಗಳಾದ ಅಲ್ಲಮಾ ಇಕ್ಬಾಲ್(20) ಮತ್ತು ಮುಹ ಮ್ಮದ್ ಫಯಾಝ್(20) ಬಂಧಿತ ಆರೋಪಿಗಳಾಗಿದ್ದಾರೆ.

ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರನ್ನು ಮಂಜೇಶ್ವರ ಬಳಿ ಪೊಲೀಸರು ತಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಈ ವೇಳೆ ಬೈಕ್ ಸವಾರರು ಅಸ್ಪಷ್ಟ ಉತ್ತರ ನೀಡಿದ್ದರಿಂದ ಸಂಶಯಗೊಂಡು ಪರಿಶೀಲಿಸಿದಾಗ ಪ್ಲಾಸ್ಟಿಕ್ ಕವರ್ ನಲ್ಲಿ ಗಾಂಜಾ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!