February 3, 2026

ಕೇಂದ್ರ ಸಚಿವ ಕಿರಣ್ ರಿಜಿಜು ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

0
IMG-20230408-WA0020.jpg

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬನಿಹಾಲ್ ಪ್ರದೇಶದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ಕಾರ್ ಅಪಘಾತಕ್ಕೆ ಒಳಗಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಜಮ್ಮು ಮತ್ತು ಕಾಶ್ಮೀರದ ಬನಿಹಾಲ್ ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಸಚಿವ ಕಿರಣ್ ರಿಜಿಜು, ಎಡಿಜಿ ಮುಖೇಶ್ ಸಿಂಗ್ ಸೇರಿ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನು ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಚಿವ ಕಿರಣ್ ರಿಜಿಜು ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿ ಅದೃಷ್ಟವಶಾತ್ ಅಪಘಾತದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!