March 23, 2026

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ವಸ್ತು ಸಾಗಾಟ: ಓರ್ವ ಸಿಸಿಬಿ ಪೊಲೀಸರ ವಶಕ್ಕೆ

0
IMG-20230408-WA0021.jpg

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಸಾಗಾಟ ಮಾಡುತ್ತಿದ್ದ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಕಾಸರಗೋಡು ಚೆರ್ಕಳದ ಅಬ್ದುಲ್ಲಾ ಸಿ (39) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿ ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಅಕ್ರಮವಾಗಿ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಬರುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇನ್ನು ಎಸಿಪಿ ಪಿ.ಎ. ಹೆಗ್ಡೆ ನೇತೃತ್ವದ ಸಿಸಿಬಿ ಪೊಲೀಸರ ತಂಡ ಆರೋಪಿಯಿಂದ 150 ಗ್ರಾಂ ಎಂಡಿಎಂಎ, ಬಳಸಿದ ಕಾರು ಮತ್ತು ಮೊಬೈಲ್ ಫೋನ್ ಜಪ್ತಿ ಮಾಡಿದೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯ 17.61 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯ ವಿರುದ್ಧ ವಿಶಾಖಪಟ್ಟಣ ಮತ್ತು ಕಾಸರಗೋಡು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟಕ್ಕೆ ಸಂಬಂಧಿಸಿದ ಪ್ರಕರಣಗಳು ಬಾಕಿ ಇವೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!