February 3, 2026

ಕೆಪಿಸಿಸಿಯ ನೂತನ ಕಾರ್ಯಾಧ್ಯಕ್ಷರಾಗಿ ಬಿ.ಎನ್.‌ ಚಂದ್ರಪ್ಪ ನೇಮಕ

0
IMG-20230409-WA0016.jpg

ಬೆಂಗಳೂರು: ಕೆಪಿಸಿಸಿಯ ನೂತನ ಕಾರ್ಯಾಧ್ಯಕ್ಷರನ್ನಾಗಿ ಮಾಜಿ ಸಂಸದ ಬಿ.ಎನ್.‌ ಚಂದ್ರಪ್ಪ ಅವರನ್ನು ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

ಮಾಜಿ ಸಂಸದ ಆರ್. ಧ್ರುವನಾರಾಯಣ್‌ ಅವರು ಹೃದಯಾಘಾತದಿಂದ ಇತ್ತೀಚೆಗೆ ನಿಧನರಾದ ಬಳಿಕ ಈ ಸ್ಥಾನ ತೆರವಾಗಿದ್ದು, ಚುನಾವಣೆಯ ತಯಾರಿಯಲ್ಲಿರುವ ಕಾಂಗ್ರೆಸ್‌ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಗೆ ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದೆ.

ಇನ್ನು ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಬಿ.ಎನ್.‌ ಚಂದ್ರಪ್ಪ ಅವರನ್ನು ಕಾರ್ಯಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಈ ಆದೇಶ ತಕ್ಷಣದಿಂದಲೇ ಜಾರಿ ಮಾಡುವಂತೆ ಎಐಸಿಸಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!