July 5, 2026

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಪ್ರಕಟ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ

0
IMG-20230409-WA0034.jpg

ನವದೆಹಲಿ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ(ನಾಳೆ) ಬಿಡುಗಡೆ ಮಾಡಲಾಗುವು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ದೆಹಲಿಗೆ ಹೋಗಿ ಬಂದಿರುವ ಸಿಎಂ ಬೊಮ್ಮಾಯಿ ಮಾತನಾಡಿ, ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಚರ್ಚೆ ನಡೆದಿದ್ದು, ಸೋಮವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಚರ್ಚೆ ನಡೆಸಲಾಗಿದೆ. ಸಭೆಯಲ್ಲಿ 224 ಕ್ಷೇತ್ರಗಳ ಬಗ್ಗೆಯೂ ಚರ್ಚೆ ಆಗಿದೆ. ಕೆಲ ಕ್ಷೇತ್ರಗಳ ಬಗ್ಗೆ ಇನ್ನೂ 2 ಗಂಟೆಗಳ ಕಾಲ ಚರ್ಚೆ ಅಗತ್ಯವಿದೆ. ಕೆಲವು ಕ್ಷೇತ್ರಗಳಲ್ಲಿ ಹೆಚ್ಚಿನ ಅಭ್ಯರ್ಥಿಗಳಿದ್ದಾರೆ. ಕಾರ್ಯಕರ್ತರ ಅಭಿಪ್ರಾಯ ಹಾಗೂ ಸರ್ವೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಇದಾದ ಬಳಿಕ ಬಿಜೆಪಿ ಸಂಸದೀಯ ಮಂಡಳಿಗೆ ಪಟ್ಟಿ ರವಾನಿಸಲಾಗುತ್ತದೆ ಎಂದರು.

Leave a Reply

Your email address will not be published. Required fields are marked *

You may have missed

error: Content is protected !!