February 2, 2026

ಹರಿಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಕಾರು ಅಪಘಾತ: ಅಪಾಯದಿಂದ ಪಾರು
 

0
hr-090423-car.jpg

ಹರಿಯಾಣ: ಹಿಸಾರ್‌ನಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ಪ್ರಯಾಣಿಸುತ್ತಿದ್ದ ಕಾರು ಭಾನುವಾರ ಅಪಘಾತಕ್ಕೀಡಾಗಿದೆ.

ಹರಿಯಾಣದ ಹಿಸಾರ್ ಜಿಲ್ಲೆಯ ಬರ್ವಾಲಾ ಬಳಿ ಸಾಗುತ್ತಿದ್ದಾಗ ಭೂಪಿಂದರ್ ಸಿಂಗ್ ಹೂಡಾ ಅವರ ಕಾರಿಗೆ ಕಾಡು ಪ್ರಾಣಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮಾಜಿ ಸಿಎಂ ಸೇರಿದಂತೆ ವಾಹನದಲ್ಲಿದ್ದ ಇತರ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಇನ್ನು ಹಿಸಾರ್ ನ ಗಿರಾಯೇ ಪ್ರದೇಶದಲ್ಲಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ವೇಳೆ ಕಾಡು ಪ್ರಾಣಿ ಡಿಕ್ಕಿ ಹೊಡೆದಿದೆ ಅದೃಷ್ಟವಶಾತ್ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!