September 19, 2024

ಚಾರ್ಮಾಡಿ ಘಾಟಿಯಲ್ಲಿ 100 ಮೀಟರ್ ಆಳದ ಕಂದಕಕ್ಕೆ ಉರುಳಿದ ಕಾರು: ಗ್ರಾ.ಪಂ ಅಧ್ಯಕ್ಷೆ ಸಹಿತ ಐದು ಮಂದಿ ಗಂಭೀರ

0

ಬೆಳ್ತಂಗಡಿ: ಕಾರೊಂದು ಕೊಟ್ಟಿಗೆ ಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ, ಸುಮಾರು 100 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ರವಿವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಗಂಭೀರ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಇದೆ.
ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಕೊಪ್ಪದಲ್ಲಿ ನಿಧನರಾದ ಸಂಬಂಧಿಕರ ಮನೆಗೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ ಪುಷ್ಪಾವತಿ, ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ ಹಾಗೂ ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ ಸಹಿತ ಐವರು ಗಂಭೀರ ಗಾಯಗೊಂಡಿದ್ದಾರೆ, ಗಾಯಾಳುಗಳನ್ನು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಮುಂದುವರೆಸಲಾಗಿದೆ.

ಪ್ರಪಾತಕ್ಕೆ ಬಿದ್ದವರನ್ನು ಸ್ಥಳೀಯರ ಸಹಕಾರದೊಂದಿಗೆ ಮೇಲೆತ್ತಲಾಗಿದೆ. ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!