ನದಿಯಲ್ಲಿ ಮುಳುಗಿ ತಂದೆ, ಮಗ ಸಾವು
ಮಾಗುಂಡಿ: ಸಮೀಪ ಭದ್ರ ನದಿಯಲ್ಲಿ ಮುಳುಗಿ ತಂದೆ ಮಗ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಮೃತರನ್ನು ಮೂಡಿಗೆರೆ ಸಮೀಪದ ಹಂಡುಗುಳಿ ಗ್ರಾಮದ ಲೋಕೇಶ್(40) ಮತ್ತು ಅವರ ಮಗ ಸಾತ್ವಿಕ್(13) ಎಂದು ಗುರುತಿಸಲಾಗಿದೆ.
ಮಾಗುಂಡಿ ಸಮೀಪದ ಹುಯ್ಗೆರೆ ಗ್ರಾಮದಲ್ಲಿ ತಮ್ಮ ಸಂಬಂಧಿಕರ ಮನೆಗೆ ಸುಗ್ಗಿ ಹಬ್ಬಕ್ಕೆಂದು ಲೋಕೇಶ್ ತನ್ನ ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ತೆರಳಿದ್ದರು.
ಮನೆಯ ಸಮೀಪದಲ್ಲೇ ಹರಿಯುತ್ತಿರುವ ಭದ್ರ ನದಿಯ ಬಳಿಗೆ ನಿನ್ನೆ ಸಂಜೆ ಸಂಬಂಧಿಕರು ತೆರಳಿದ್ದಾರೆ. ಸಂಜೆ ಸುಮಾರು 4 ರ ಸಮಯದಲ್ಲಿ ಹೊಳೆಯಲ್ಲಿ ಬಂಡೆಯೊಂದರ ಮೇಲೆ ನಿಂತಿದ್ದ ಸಾತ್ವಿಕ್ ಕಾಲು ಜಾರಿ ನೀರಿಗೆ ಬಿದ್ದಿದ್ದು, ಈ ಸಂದರ್ಭದಲ್ಲಿ ಮಗನನ್ನು ರಕ್ಷಿಸಲು ತಂದೆ ಲೋಕೇಶ್ ಸಹ ನದಿಗೆ ಹಾರಿದ್ದಾರೆ. ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ. ಇಬ್ಬರಿಗೂ ಈಜು ಬರುತ್ತಿರಲಿಲ್ಲ ಎಂದು ತಿಳಿದುಬಂದಿದೆ.




