February 2, 2026

ದೇವಾಲಯದ ಆವರಣದಲ್ಲಿದ್ದ ಟಿನ್‌ ಶೆಡ್‌ ಮೇಲೆ ಉರುಳಿ ಬಿದ್ದ ಬೃಹತ್ ಮರ: 7 ಮಂದಿ ಮೃತ್ಯು

0
image_editor_output_image-489141877-1681106527848.jpg

ಮಹಾರಾಷ್ಟ್ರ: ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿನ ದೇವಾಲಯವೊಂದರ ಆವರಣದಲ್ಲಿದ್ದ ಟಿನ್‌ ಶೆಡ್‌ ಮೇಲೆ ಬೃಹತ್‌ ಮರವೊಂದು ಉರುಳಿ ಬಿದ್ದಿದ್ದು, ಅಲ್ಲಿ ಆಶ್ರಯ ಪಡೆದಿದ್ದ 7 ಮಂದಿ ಮೃತಪಟ್ಟಿದ್ದಾರೆ.

ಬಾಲಾಪುರ್‌ ತಾಲ್ಲೂಕಿನ ಪರಾಸ್‌ ಹಳ್ಳಿಯಲ್ಲಿರುವ ಬಾಬುಜಿ ಮಹಾರಾಜ್‌ ದೇವಾಲಯದಲ್ಲಿ ಭಾನುವಾರ ರಾತ್ರಿ 7.30ರ ಸುಮಾರಿಗೆ ದುರಂತ ಸಂಭವಿಸಿದ್ದು, ಈ ಬಗ್ಗೆ ಸ್ಥಳೀಯ ಆಡಳಿತ ಸೋಮವಾರ ಮಾಹಿತಿ ನೀಡಿದೆ.

ಪೂಜಾ ಕಾರ್ಯಕ್ರಮದ ಸಲುವಾಗಿ ಜನರು ದೇವಾಲಯಕ್ಕೆ ಆಗಮಿಸಿದ್ದರು. ಶತಮಾನದಷ್ಟು ಹಳೆಯ ಮರ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಟಿನ್‌ ಶೆಡ್‌ ಮೇಲೆ ಬಿದ್ದಿದೆ.

40 ಜನರು ಅಲ್ಲಿ ಆಶ್ರಯ ಪಡೆದಿದ್ದರು. ಈ ಪೈಕಿ 7 ಮಂದಿ ಮೃತಪಟ್ಟು, 23 ಜನರು ಗಾಯಗೊಂಡಿದ್ದಾರೆ. ಐವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!