ಮಸೀದಿಯಲ್ಲಿ ನಮಾಝ್ ಮಾಡುತ್ತಿದ್ದವರ ಮೇಲೆ ಸಂಘಪರಿವಾರದ ಕಾರ್ಯಕರ್ತರಿಂದ ದಾಳಿ: ಆಸ್ಪತ್ರೆಗೆ ದಾಖಲು
ಚಂಡೀಗಢ: ಮಸೀದಿಯೊಂದರ ಮೇಲೆ ದಾಳಿ ಮಾಡಿ, ನಮಾಜ್ ಮಾಡುತ್ತಿದ್ದವರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆಗೈದಿರುವ ಘಟನೆ ಹರಿಯಾಣದ ಸೋನಿಪತ್‌ನ ಸ್ಯಾಂಡಲ್ ಕಲಾನ್ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಗ್ರಾಮದಲ್ಲಿ ಸಣ್ಣದಾಗಿ ನಿರ್ಮಾಣ ಮಾಡಿರುವ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದ ವೇಳೆ 15-20 ಜನರಿದ್ದ ಸಂಘಪರಿವಾರದ ಗುಂಪು ಲಾಠಿ ಹಿಡಿದುಕೊಂಡು ಮಸೀದಿ ಮೇಲೆ ದಾಳಿ ಮಾಡಿದೆ.
ಮಸೀದಿಯಲ್ಲಿನ ವಸ್ತುಗಳನ್ನು ಒಡೆದು ಹಾಕಿ ಹಾನಿ ಮಾಡಿದ್ದಾರೆ. ಇದಾದ ಬಳಿಕ ನಮಾಜ್ ಮಾಡುತ್ತಿದ್ದ ಜನರ ಮೇಲೆ ಹಲ್ಲೆ ಮಾಡಿದ್ದಾರೆ.
ಘಟನೆಯಲ್ಲಿ ಇಸ್ತಾಕ್ ಅಲಿ, ಅಲಾಮಿರ್, ಸಬೀರ್ ಅಲಿ, ಫರ್ಯಾದ್, ಅನ್ಸರ್ ಅಲಿ, ಜುಲೇಖಾ, ಅಲಿ ತಾಬ್, ನರ್ಗೀಸ್ ಮತ್ತು ಜರೀನಾ ಎಂಬುವರು ಸೇರಿ ಒಟ್ಟು ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಘಟನೆಗೆ ಕಾರಣವೇನು ಎಂಬುದು ಇದುವರೆಗೆ ತಿಳಿದು ಬಂದಿಲ್ಲ. 19 ಮಂದಿಯ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಸೋನಿಪತ್ ಒಂದು ಪ್ರಮುಖ ಕೈಗಾರಿಕಾ ಪ್ರದೇಶವಾಗಿದ್ದು, ಸದ್ಯ ಘಟನಾ ಸ್ಥಳದ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.




