February 3, 2026

ಬಂಟ್ವಾಳ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ, ಪ್ರಯಾಣಿಕರಿಗೆ ಗಾಯ

0
image_editor_output_image-2013298006-1681118332550.jpg

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದು ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ ಹೊಡೆದು ಪಲ್ಟಿಯಾದ ಕಾರು ಬೈಕಿಗೆ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಎ. 10 ರಂದು ಸೋಮವಾರ ಫರಂಗಿಪೇಟೆ ಎಂಬಲ್ಲಿ ನಡೆದಿದೆ.

ಬಿಸಿರೋಡಿನಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಳಿಕ ಬೈಕಿಗೆ ಢಿಕ್ಕಿಯಾಗಿದೆ.

ಘಟನೆಯಲ್ಲಿ ಪ್ರದೀಪ್ ಸೋಮನಾಥ ಬೆಳ್ಚಾಡ, ಕಸ್ತೂರಿ, ಸಲೋರಿ ವಿನಯಕುಮಾರ್, ಕಿಶೋರಿ ವಿನಯಕುಮಾರ್ ಎಂಬವರು ಗಾಯಗೊಂಡಿದ್ದು, ಇವರ ಪೂರ್ಣವಾದ ವಿವರ ಇನ್ನೂ ಕೂಡ ತಿಳಿದುಬಂದಿಲ್ಲ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಬೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!