September 3, 2026

ದಾಖಲೆ ಇಲ್ಲದೆ ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ 10 ಟನ್ ಪಡಿತರ ಅಕ್ಕಿ ಜಪ್ತಿ

0
image_editor_output_image-784108910-1681168450562.jpg

ಸಂಕೇಶ್ವರ: ದಾಖಲೆ ಇಲ್ಲದೆ ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು 2.31 ಲಕ್ಷ ಮೌಲ್ಯದ 10 ಟನ್ ಪಡಿತರ ಅಕ್ಕಿಯನ್ನು ಎಫ್‍ಎಸ್‍ಟಿ ಹಾಗೂ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಸಂಕೇಶ್ವರದ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.
ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಸಂಕೇಶ್ವರದ ಚೆಕ್ ಪೋಸ್ಟ್ ನಲ್ಲಿ ಎಫ್‍ಎಸ್‍ಟಿ ಹಾಗೂ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಯಾವುದೇ ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಲಾರಿ ಹಾಗೂ ಸುಮಾರು 2.31 ಲಕ್ಷ ಮೌಲ್ಯದ 10 ಟನ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!