September 20, 2024

ಬೈಂದೂರು: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು

0

ಬೈಂದೂರು: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ಶಿರೂರು ಮಾರ್ಕೆಟ್ ಬಳಿಯ ಮನೆಯೊಂದರಲ್ಲಿ ನಡೆದಿದೆ.

ಶಿರೂರು ಮಾರ್ಕೆಟ್ ಬಳಿ ಹಾರ್ಡ್‌ವೇರ್ ಉದ್ಯಮ ನಡೆಸುತ್ತಿರುವ ಅಜೀಮ್ ಎಂಬವರು ರಾತ್ರಿ ಊಟ ಮಾಡಿ ಮಸೀದಿಗೆ ಪ್ರಾರ್ಥನೆಗೆ ತೆರಳಿ ವಾಪಾಸ್ಸು ಬಂದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ.

ಇನ್ನು ನುಗ್ಗಿದ ಕಳ್ಳರು, ಮನೆಯೊಳಗಿದ್ದ 18 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ 12 ಲಕ್ಷ ನಗದು ಕಳವು ಮಾಡಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!